ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ; ಮೇ 29 ರಿಂದ ಶಾಲಾರಂಭ!!

ಶಾಲಾ ಶಿಕ್ಷಣ ಇಲಾಖೆಯ 2025 26 ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 29 ರಿಂದ ಶಾಲಾ ತರಗತಿಗಳನ್ನು ಆರಂಭಿಸಲು ಸೂಚನೆ ನೀಡಿದೆ. ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಈ ಸೂಚನೆ ಅನ್ವಯವಾಗಲಿದೆ.
ಶಾಲೆಗಳ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ಕೂಡ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮೇ 29 ರಿಂದ ಸೆಪ್ಟೆಂಬರ್ 19 ರವರೆಗೆ ಶಾಲಾ ತರಗತಿಗಳ ಮೊದಲ ಅವಧಿ ಹಾಗೂ ಅಕ್ಟೋಬರ್ 8 ರಿಂದ 2026ನೇ ಏಪ್ರಿಲ್ 10ರವರೆಗೆ ಎರಡನೇ ಅವಧಿಯಾಗಿ ಶಾಲೆಗಳು ಕರ್ತವ್ಯ ನಿರ್ವಹಿಸಲಿದೆ.

ಪ್ರತಿವರ್ಷದಂತೆ ಶಾಲಾ ಮಧ್ಯಭಾಗದಲ್ಲಿ ಬರುವ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರವರೆಗೆ ನೀಡಲಾಗಿದೆ. ಹಾಗೆಯೇ ವಾರ್ಷಿಕ ಬೇಸಿಗೆ ರಜೆಯನ್ನು 2026ರ ಏಪ್ರಿಲ್ 11 ರಿಂದ ಮೇ 28 ರವರೆಗೆ ನೀಡಲಾಗಿದೆ. ಈ ಅವಧಿಯಲ್ಲಿ ಬಿಸಿಯೂಟ ಸಾಮಗ್ರಿಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿತ್ತುಕೊಳ್ಳುವಂತೆ ಸೂಚನೆ ನೀಡಿದೆ. 

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 242 ದಿನಗಳಲ್ಲಿ ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನಗಳನ್ನು ಕರ್ತವ್ಯದ ದಿನವೆಂದು ನಿಗದಿ ಮಾಡಲಾಗಿದೆ. ಪಠ್ಯ, ಪಠ್ಯೇತರ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣೆಯ ಕಾರ್ಯಕ್ಕಾಗಿ 22 ದಿನ ನಿಗದಿಪಡಿಸಲಾಗಿದೆ. ಹಾಗೆಯೇ ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನ, ಶಾಲಾ ಸ್ಥಳ ತಳಿಯ ರಜೆಗಳಿಗೆ ನಾಲ್ಕು ದಿನ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯಕ್ಕೆ 175 ದಿನಗಳನ್ನು ಮೀಸಲಿಡಲಾಗಿದೆ. 

ಈ ವರ್ಷ ಪ್ರಾಥಮಿಕ ಶಾಲೆಗಳಲ್ಲಿ ಏಪ್ರಿಲ್ 8ರಂದು ಮತ್ತು ಪ್ರೌಢಶಾಲೆಗಳಲ್ಲಿ ಏಪ್ರಿಲ್ 9ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಸಬೇಕು ಹಾಗೂ ಪೋಷಕರ ಸಭೆ ಕರೆದು ಫಲಿತಾಂಶ ಪ್ರಕಟಿಸಬೇಕು. ಸೆಪ್ಟೆಂಬರ್ 14ರಂದು ಬರುವ ಡಾ.ಬಿಆರ್ ಅಂಬೇಡ್ಕರ್ ಜಯಂತಿಯನ್ನು ಎಲ್ಲಾ ಶಾಲೆಗಳಲ್ಲಿಯೂ ಕಡ್ಡಾಯವಾಗಿ ಆಚರಿಸಬೇಕು. ಕ್ರಿಸ್ಮಸ್ ರಜೆಯನ್ನು ಜಿಲ್ಲಾ ಉಪ ನಿರ್ದೇಶಕರಿಗೆ ಸಲ್ಲಿಸಿ ಆನಂತರ ಘೋಷಿಸಬೇಕು. ಸರಕಾರ ನೀಡುವ ಸೌಲಭ್ಯಗಳನ್ನು ಜನರಿಗೆ ತಿಳಿಸಲು ಮಿಂಚಿನ ಸಂಚಾರ ಕೈಗೊಂಡು ದಾಖಲಾತಿ ಪ್ರಮಾಣ ಹೆಚ್ಚಲ ಮಾಡಬೇಕು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

Post a Comment

0 Comments