ರಾಜ್ಯದ ಈ ಜಿಲ್ಲೆಗಳಲ್ಲಿ 4-5 ದಿನ ಭಾರೀ ಮಳೆ ಸಾಧ್ಯತೆ..!!

ಕರ್ನಾಟಕದ ಕೆಳ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ ನಾಲ್ಕರಿಂದ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದ್ದು, ಅದರಲ್ಲೂ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೋಲಾರ, ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಏಪ್ರಿಲ್ 17ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಇತರ ಜಿಲ್ಲೆಗಳಾದ ಹಾಸನ,  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Post a Comment

0 Comments