ಜನಸಾಮಾನ್ಯರು ಬಳಸುವ ಅಡುಗೆ ಅನಿಲದ ಬೆಲೆ ಪ್ರತಿ ಸಿಲಿಂಡರಿಗೆ 50 ರೂ ಏರಿಕೆ ಮಾಡಿದ್ದು, ಈ ದರ ಏರಿಕೆ ಉಜ್ವಲ ಯೋಜನೆಯ ಫಲಾನುಭವಿಗಳಿಗೂ ಅನ್ವಯವಾಗಲಿದೆ.
ಜೊತೆಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಇದರ ಅನ್ವಯ ತೈಲ ಕಂಪನಿಗಳ ಮೇಲೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎರಡು ರೂಪಾಯಿ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ.
0 Comments