ಏಪ್ರಿಲ್ 8ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!!!

ಕರ್ನಾಟಕದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಕಾತರದಿಂದ ತಮ್ಮ ಫ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಏಪ್ರಿಲ್ 8 ರಂದು ಅಂದರೆ ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಮಾರ್ಚ್ 1 ರಿಂದ 20 ನೇ ತಾರೀಖಿನವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ನಡೆದಿತ್ತು. ಈಗಾಗಲೇ ಎಲ್ಲಾ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಕಾರ್ಯವೂ ಮುಕ್ತಾಯವಾಗಿರುತ್ತದೆ.

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದೆ.
ಪರೀಕ್ಷೆ ಬರೆದಿರುವ ದ್ವಿತೀಯ  ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

Post a Comment

0 Comments