ಕನ್ನಡ ಸಿನಿಮಾ ರಂಗದಲ್ಲಿ ಪೋಷಕ ನಟನಾಗಿ ಅಭಿನಯಿಸುತ್ತಿದ್ದ ಬ್ಯಾಂಕ್ ಜನಾರ್ಧನ್ ಅವರು ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಇವರು 1991 ರವರೆಗೆ ಚಿತ್ರರಂಗದಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ಮನರಂಜಿಸುವ ಕೆಲಸ ಮಾಡುತ್ತಿದ್ದರು. ತದನಂತರ ಬಣ್ಣದ ಲೋಕದಿಂದ ದೂರ ಉಳಿದೇ ಬಿಟ್ಟರು.
ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ,ಜೀ ಬೂಂಬಾ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ತಮ್ಮ ನಟನಾ ಸಾಮರ್ಥ್ಯವನ್ನು ಕರುನಾಡಿಗೆ ತೋರಿಸಿಕೊಟ್ಟ ಮಹಾನ್ ಕಲಾವಿದ ಬ್ಯಾಂಕ್ ಜನಾರ್ದನ್. ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಕೆಲಸ ಮಾಡಿದ ಅನುಭವ ಇವರಿಗಿದೆ. ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಮೊದಲಾದ ಧಾರಾವಾಹಿಗಳಲ್ಲೂ ಬ್ಯಾಂಕ್ ಜನಾರ್ಧನ್ ಬಣ್ಣ ಹಚ್ಚಿದ್ದರು.
1991ರಲ್ಲಿ ಕಾಶಿನಾಥ್ ಅವರ ಅಜಗಜಾಂತರ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪೋಷಕ ಕಲಾವಿದರಾಗಿ ಕಾಲಿಟ್ಟ ಬ್ಯಾಂಕ್ ಜನಾರ್ದನ್, 1993ರ ಶ್ ಹಾಗೂ 1992ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ, 2005ರ ನ್ಯೂಸ್ ಚಿತ್ರದಲ್ಲಿನ ಇವರ ಪಾತ್ರಗಳನ್ನು ಇಂದಿಗೂ ಜನ ನೆನಪಿಸಿಕೊಳ್ಳುತ್ತಾರೆ. ಹಾಸ್ಯ ಕಲಾವಿದರಾಗಿ ಜನರಲ್ಲೂ ಮನರಂಜಿಸಿದ ಇವರ ಬದುಕು ಎಂದಿಗೂ ಮರೆಯಲಾಗದ ಅದ್ಭುತ ಪಯಣವೇ ಸರಿ. ಅಗಲಿದ ರಂಗಭೂಮಿ ಕಲಾವಿದನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.
0 Comments