ಬರ ಮುಲ್ಲಾ ಸೆಕ್ಟರ್ ನಲ್ಲಿ ಭಾರತೀಯ ಸೇನೆಯು ನಡೆಸಿದ ಮುಂದಿನ ದಾಳಿಯಲ್ಲಿ ಇಬ್ಬರು ಪಾಕಿಸ್ತಾನ ಉಗ್ರರು ಧರೆಗುರುಳಿದ್ದು, ಅಪಾರ ಪ್ರಮಾಣದ ಮದ್ದು ಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮ್ಮು ಕಾಶ್ಮೀರದ ಬಾರ ಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪ್ರಯತ್ನ ಪಡುವುದನ್ನು ಭಾರತೀಯ ಭದ್ರತಾ ಪಡೆಗಳು ತಡಿದು ದಾಳಿ ನಡೆಸಿದ ನಂತರ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿರುವ ಬಗ್ಗೆ ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ.
"ಏಪ್ರಿಲ್ 23, 2025 ರಂದು, ಉತ್ತರ ಕಾಶ್ಮೀರದ ಬಾರಾಮುಲ್ಲಾ ನಾಲಾದ ಸಾಮಾನ್ಯ ಪ್ರದೇಶವಾದ ಸರ್ಜೀವನ್ ಮೂಲಕ ಸುಮಾರು 2-3 ಯುಐ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದರು" ಎಂದು ಚಿನಾರ್ ಕಾರ್ಪ್ಸ್ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿತು.
0 Comments