ಇಸ್ರೋದ ಮಾಜಿ ಮುಖ್ಯಸ್ಥ ಹಾಗೂ ಮಹತ್ವಾಕಾಂಕ್ಷೆಯ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿರಂಗನ್ ಇಂದು ಬೆಂಗಳೂರಿನಲ್ಲಿ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
84 ವರ್ಷ ಪ್ರಾಯದ ಕಸ್ತೂರಿರಂಗನ್ ಅವರು ಇಂದು ಬೆಳಗ್ಗೆ 10:43ರ ಸುಮಾರಿಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಇವರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಎಪ್ರಿಲ್ 26ನೇ ತಾರೀಖು ಅಂದರೆ ನಾಳೆ ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ (ಆರ್‌ಆರ್‌ಐ) ನಲ್ಲಿ ಅವಕಾಶ ನೀಡಲಾಗಿದೆ.
NEPಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಅಲ್ಲದೆ, ರಾಜ್ಯಸಭೆಯ ಸದಸ್ಯರಾಗಿ (2003-09) ಮತ್ತು ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಸ್ತೂರಿರಂಗನ್ 2004ರ ಏಪ್ರಿಲ್ ನಿಂದ 2009 ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ಸಂಸ್ಥೆಯ ನಿರ್ದೇಶಕರಾಗಿದ್ದರು.
0 Comments