ಬೀಟ್ ಪೊಲೀಸರು, ಚೆಕ್ ಪೋಸ್ಟ್ ಗಳಲ್ಲಿರುವ ಪೊಲೀಸರು ಹೆಚ್ಚು ಸಕ್ರಿಯರಾಗಿರುವಂತೆ ಸೂಚನೆ ನೀಡಲಾಗಿದ್ದು, ರಾತ್ರಿ ವೇಳೆ ಪೊಲೀಸರ ಗಸ್ತಿರುವುದು ನಿಟ್ಟಿನಲ್ಲಿ ಠಾಣಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆಗೂ ಕ್ರಮ ಕೈಗೊಳ್ಳಲಾಗಿದೆ.
ಶಾಲಾ-ಕಲೇಜುಗಳಿಗೆ ರಜೆ ಇರುವ ಹಿನ್ನಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಕಂಡು ಬರುತ್ತಿದೆ. ಸಮುದ್ರ ತೀರಗಳು, ಧಾರ್ಮಿಕ ಕೇಂದ್ರಗಳು ಸೇರಿದಂತೆ ವಿವಿಧ ಪ್ರವಾಸಿ ತಾಣಗಳ ಮೇಲೂ ನಿಗ ಇಡಲಾಗಿದ್ದು, ಅನುಮಾನಾಸ್ಪದವಾಗಿ ಓಡಾಡುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳ ಪ್ರಚೋದನಕಾರಿ ಹೇಳಿಕೆಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಇವುಗಳ ಮೇಲೂ ನಿಗಾ ಇಡಲಾಗುತ್ತಿದೆ.
ದಕ್ಷಿಣ ಕನ್ನಡದಲ್ಲಿ ವಿಮಾನ ನಿಲ್ದಾಣ, ಬಂದರುಗಳು, ವಿವಿಧ ಕೇಂದ್ರ ಸರಕಾರಿ ಸ್ವಾಮ್ಯದ ಸಂಸ್ಥೆಗಳು, ಬೃಹತ್ ಕಂಪನಿಗಳು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಂತೆ ಜಿಲ್ಲಾಡಳಿತವು ಈಗಾಗಲೇ ಸೂಚನೆ ನೀಡಿದೆ. ಈ ಸಂಸ್ಥೆಗಳಲ್ಲಿ ಭದ್ರತಾ ಸಿಬ್ಬಂದಿಗಳಾಗಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯವರು ಗಸ್ತು ಸಹಿತ ಭದ್ರತೆಯನ್ನು ಬಿಗುಗೊಳಿಸಿದ್ದಾರೆ. ಸಮುದ್ರ ತೀರದಲ್ಲಿ ಕೋಸ್ಟ್ ಗಾರ್ಡ್ ಕಟ್ಟೆಚ್ಚರ ವಹಿಸಿದೆ. ರೈಲು ನಿಲ್ದಾಣದಲ್ಲಿಯೂ ಪೊಲೀಸ್ ರೈಲ್ವೇ ಪೊಲೀಸರಿಗೆ ಇಲಾಖೆ ಈಗಾಗಲೇ ಅಲರ್ಟ್ ಆಗಿರುವಂತೆ ಸೂಚಿಸಿದೆ.
0 Comments