ರೈಲ್ವೆ ಇಲಾಖೆಯಲ್ಲಿನ ನರ್ಸಿಂಗ್ ಸೂಪರಿಟೆಂಡೆಂಟ್ ಹುದ್ದೆಗೆ ಮಂಗಳವಾರ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕೇಂದ್ರದೊಳಗೆ ಪಾಲಿಸಬೇಕಾದ ನಿಯಮ ಸೂಚನೆಗಳನ್ನು ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದ್ದು, ಪ್ರವೇಶ ಪತ್ರದ 7ನೇ ಕ್ರಮಾಂಕದ ಸೂಚನೆಯಲ್ಲಿ ಮಂಗಳಸೂತ್ರ ಧರಿಸುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ಧರ್ಮದ ಸಂಕೇತಗಳನ್ನು ಧರಿಸದಂತೆ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ಧರ್ಮ ಸಂಕೇತಗಳು ಯಾವುವು ಎಂಬುದರ ಬಗ್ಗೆ ಸ್ಪಷ್ಟತೆ ನೀಡಿಲ್ಲ.
ಬ್ರಾಹ್ಮನ ಮತ್ತು ಇತರ ಸಮುದಾಯದವರು ಧರಿಸುವಂತಹ ಜನಿವಾರ, ವೀರಶೈವರು ಧರಿಸುವ ಕರಡಿಕೆಗೂ ಅವಕಾಶವಿಲ್ಲವೇ ಎಂಬ ಜಿಜ್ಞಾಸೆ ಮೂಡಿದೆ. ಈ ಹಿಂದೆ ರಾಜ್ಯದಲ್ಲಿ ನಡೆದ ನೇಮಕಾತಿ ಪರೀಕ್ಷೆಯೊಂದರ ವೇಳೆ ಮಂಗಳಸೂತ್ರ ಬಿಚ್ಚಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು ಬಾರಿ ಆಕ್ರೋಶಕ್ಕೆ ಕಾರಣವೂ ಆಗಿತ್ತು.
ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಟೆಂಡೆಂಟ್ ಹುದ್ದೆಗೆ ನಾಳೆ ಬೋಂದೇಲ್ ನ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ವೇಳೆ ಮಂಗಳಸೂತ್ರ ಅಥವಾ ಜನಿವಾರ ಮೊದಲಾದ ಧರಿಸುವಂತಿಲ್ಲ ಎಂಬ ಸೂಚನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
0 Comments