ಉಚಿತ ಬಸ್ ಪ್ರಯಾಣಕ್ಕಿನ್ನು ಸ್ಮಾರ್ಟ್ ಕಾರ್ಡ್..!!

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಮಹತ್ವಕಾಂಕ್ಷಿ ಯೋಜನೆಯ ಶಕ್ತಿ ಯೋಜನೆಯನ್ನು ಮತ್ತಷ್ಟು ಸರಲೀಕರಿಸುವ ಉದ್ದೇಶದಿಂದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ಬಗ್ಗೆ ಸಾರಿಗೆ ಇಲಾಖೆಯು ಚಿಂತನೆ ನಡೆಸಿದೆ. 
ಶಕ್ತಿ ಯೋಜನೆಯು ಜಾರಿಯಾದ ಕೆಲವೇ ತಿಂಗಳಲ್ಲಿ ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸ್ಮಾರ್ಟ್ ಕಾರ್ಡ್ ನೀಡಲಿದೆ ಎಂದು ಘೋಷಣೆ ಮಾಡಿತ್ತು. ಆದರೆ ಈ ಸ್ಮಾರ್ಟ್ ಕಾರ್ಡ್ ಗೆ 17 ರಿಂದ 30 ರೂಪಾಯಿವರೆಗೆ ವೆಚ್ಚ ತಗುಳುವ ಹಿನ್ನೆಲೆಯಲ್ಲಿ ಈ ಬಗ್ಗೆ ಸರ್ಕಾರವು ಆಸಕ್ತಿ ತೋರಲಿಲ್ಲ. ಆದರೆ ಪ್ರಸ್ತುತ ಸಾರಿಗೆ ಇಲಾಖೆಯು ಈ ಬಗ್ಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕ ಕೂಡಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲು ತಯಾರಿ ನಡೆಸಲಾಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮದಲ್ಲಿ ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಪ್ರಯಾಣ ಮಾಡುತ್ತಿದ್ದು ಈ ಮೂಲಕ ಬಸ್ಸಿನಲ್ಲಿ ಪ್ರತಿನಿತ್ಯ ಜನಜಂಗುಲಿ ಉಂಟಾಗುತ್ತದೆ. ಈ ರೀತಿಯ ಜನಜಂಗುಲಿಯಲ್ಲಿ ಬಸ್ ನಿರ್ವಾಹಕರಿಗೆ ಮಹಿಳಾ ಪ್ರಯಾಣಿಕರ ದಾಖಲೆಗಳನ್ನು ಪರಿಶೀಲಿಸಲು ಕಷ್ಟಕರವಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಸ್ಮಾರ್ಟ್ ಕಾರ್ಡ್ ಜಾರಿಗೆ ಬಂದರೆ ನಿರ್ವಾಹಕರಿಗೆ ದಾಖಲೆ ಪರಿಶೀಲಿಸುವ ಬಹುದೊಡ್ಡ ಕೆಲಸ ಕಡಿಮೆಯಾಗಲಿದೆ. ಜೊತೆಯಲ್ಲಿ ಶಕ್ತಿ ಯೋಜನೆಯ ಫಲಾನುಭವಿಗಳ ಸರಿಯಾದ ಚಿತ್ರಣವು ಸಿಗಲಿದೆ. ಈವರೆಗೆ ಮಹಿಳಾ ಪ್ರಯಾಣಿಕರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ತೋರಿಸಬೇಕಿತ್ತು. ಆದರೆ ಮುಂದಿನ ದಿನಗಳಲ್ಲಿ ಸ್ಮಾರ್ಟ್ ಕಾರ್ಡ್ ಜಾರಿಗೆ ಬಂದರೆ ಮಹಿಳೆಯರು ಸ್ಮಾರ್ಟ್ ಕಾರ್ಡ್ ತೋರಿಸಿ ಪ್ರಯಾಣ ಮಾಡಬಹುದಾಗಿದೆ.

Post a Comment

0 Comments