ಈ ರೈಲು ಸಂಚಾರದ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯ ರೈಲ್ವೇ ಖಾತೆ ಸಚಿವ ವಿ ಸೋಮಣ್ಣ ಅವರು ಏಪ್ರಿಲ್ 12ನೇ ಶನಿವಾರ ನೆರವೇರಿಸಲಿದ್ದಾರೆ. ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಜೆ 4 ಗಂಟೆಗೆ ಈ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು- ಕಬಕ ಪುತ್ತೂರು ರೈಲು ಸಂಚಾರ ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು ಎಂಬುದು ಜನ ಸಾಮಾನ್ಯರ ಬಹು ಕಾಲದ ಬೇಡಿಕೆಯಾಗಿತ್ತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರೈಲ್ವೇ ಇಲಾಖೆಯೊಂದಿಗೆ ಸದಾ ಈ ಕುರಿತು ಪ್ರಸ್ತಾಪ ಮಾಡಿದ್ದರ ಫಲವಾಗಿ ಬಹುಕಾಲದ ಬೇಡಿಕೆ ಹಾಗೂ ಕನಸು ನನಸಾಗಲು ಸಾಧ್ಯವಾಗುತ್ತಿದೆ ಎಂದು ಹೇಳಲಾಗುತ್ತಿದೆ.
0 Comments