ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ವರ್ಗಾವಣೆ ನಿಯಮ ತಿದ್ದುಪಡಿ ಮಾಡಲಾಗಿದ್ದು, ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು ಗ್ರೇಡ್ 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ನಿಯಂತ್ರಣ ನಿಯಮಗಳಲ್ಲಿ ತಿದ್ದುಪಡಿ ಮಾಡಿ ಒಂದೇ ತಾಲೂಕಿನಲ್ಲಿ ನಿರಂತರವಾಗಿ ಏಳು ವರ್ಷ ಸೇವೆ ಸಲ್ಲಿಸಿರುವ ವರ್ಗ-1 ರ ನೌಕರರನ್ನು ಅದೇ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಸ್ಥಳ ನಿಯುಕ್ತಿಗೊಳಿಸತಕ್ಕದ್ದಲ್ಲ ಎಂಬ ನಿಯಮದ ಬದಲಾಗಿ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಐದು ವರ್ಷ ಸೇವೆ ಸಲ್ಲಿಸಿರುವ ವರ್ಗ-1ರ ನೌಕರರನ್ನು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗೆ ಸ್ಥಳ ನಿಯುಕ್ತಿಗೊಳಿಸಲಾಗುವುದಿಲ್ಲ ಎಂದು ತಿದ್ದುಪಡಿ ಮಾಡಲಾಗಿದೆ. ಈ ತಿದ್ದುಪಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರ ಬಹು ವರ್ಷಗಳ ಬೇಡಿಕೆಯಾಗಿತ್ತು.
ಗ್ರಾಮ ಪಂಚಾಯಿತಿ ಕರ ವಸೂಲಿಗಾರರು, ಸ್ವಚ್ಛತಾಗಾರರು, ನೀರಗಂಟಿಗಳಿಗೆ ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಈ ಹಾಜರಾತಿದ ಕಲಿಸಲು ಅವಕಾಶ ಕಲ್ಪಿಸಿ ಪಂಚಾಯತ್ ರಾಜ್ ಆಯುಕ್ತಲಯ ಸುತ್ತೋಲೆ ಹೊರಡಿಸಿದೆ.
0 Comments