ಇಂಜಿನಿಯರಿಂಗ್ ನಲ್ಲಿ ಎಂಇ/ಎಂಟೆಕ್ ಅಥವಾ ಎಂಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಜೆಆರ್‌ಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಸೈನ್ಸ್, ಇನ್ಫಾರ್ಮಶನ್ ಸೈನ್ಸ್, ಮೈಕ್ರೋ ಎಲೆಕ್ಟ್ರಾನಿಕ್ಸ್, ಕೆಮಿಸ್ಟ್ರಿ, ಫಿಸಿಕ್ಸ್, ಏರೋ ಸ್ಪೇಸ್ ಇಂಜಿನಿಯರಿಂಗ್ ಅಥವಾ ಇದಕ್ಕೆ ಪೂರಕ ವಿಷಯಗಳಲ್ಲಿ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ರಿಸರ್ಚ್ ಅಸೋಸಿಯೇಟ್ ಹುದ್ದೆಗೂ ಇದೇ ವಿದ್ಯಾರ್ಹತೆ ನಿಗದಿಪಡಿಸಲಾಗಿದ್ದು, ಕನಿಷ್ಠ ಮೂರು ವರ್ಷಗಳ ಸೇವಾನುಭವ ಕಡ್ಡಾಯ. ಜೆ.ಆರ್.ಎಫ್ ಹುದ್ದೆಗಳಿಗೆ 28 ವರ್ಷದೊಳಗಿನವರು ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗೆ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಜೆ.ಆರ್.ಎಫ್ ಗೆ 37,000-42,000 ರೂಪಾಯಿ ಹಾಗೂ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ 58,000 ರೂ. ವೇತನ ನೀಡಲಾಗುತ್ತದೆ. ಆಸಕ್ತರು ಎಪ್ರಿಲ್ 20 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ https://isro.gov.in ವೆಬ್ಸೈಟನ್ನು ಸಂಪರ್ಕಿಸಬಹುದಾಗಿದೆ.
0 Comments