ನಿನ್ನೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಫಲಿತಾಂಶ ಸುಧಾರಣೆಗೆ ಶಿಕ್ಷಕರ ಕೊರತೆ ನೀಗಿಸುವುದು ಮುಖ್ಯವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5,000 ಶಿಕ್ಷಕರು ಹಾಗೂ ಉಳಿದ ಭಾಗದಲ್ಲಿ 5,000 ಶಿಕ್ಷಕರು ಸೇರಿ ಒಟ್ಟು 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ಘೋಷಣೆ ಮಾಡಿದ್ದಾರೆ. ಇದರ ಜೊತೆಯಲ್ಲಿ ಇನ್ನೂ ಹೆಚ್ಚುವರಿ 9000 ಶಿಕ್ಷಕರ ಹುದ್ದೆ ಸೇರಿ ಒಟ್ಟು 19000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಯೋಜನೆ ಇದೆ. ಒಳ ಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಸಮಿತಿ ವರದಿ ಬಂದ ಬಳಿಕ ಈ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
0 Comments