2024-25ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ:


2024-25ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 66.14 ಶೇಕಡ ಫಲಿತಾಂಶ ದಾಖಲಾಗಿದೆ.  ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯು 91.12%  ಫಲಿತಾಂಶದೊಂದಿಗೆ ಪ್ರಥಮ ಸ್ಥಾನ, ಉಡುಪಿ ಜಿಲ್ಲೆಯು 89.96% ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ, ಉತ್ತರ ಕನ್ನಡ ಜಿಲ್ಲೆ 83.19% ಫಲಿತಾಂಶದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದೆ.
ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು 4,61,563 ಬಾಲಕರು,4,34,884 ಬಾಲಕಿಯರು ಸೇರಿ ಒಟ್ಟು 8,42,173 ಮಕ್ಕಳು  ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ಬಾಲಕಿರು 74.00%
ಬಾಲಕರು- 58.07% ಶೇಕಡಾ ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ 8%ದಷ್ಟು ಹೆಚ್ಚು ಫಲಿತಾಂಶ ದಾಖಲಾಗಿದೆ.

ಈ ಬಾರಿ 625 ಅಂಕಗಳಿಗೆ 625 ಅಂಕ ಪಡೆಯುವ ಮೂಲಕ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಕರೆದು ಫಲಿತಾಂಶ ಪ್ರಕಟಿಸಿದ್ದು 12.30ರ ನಂತರ ವೆಬ್ಸೈಟ್ ಮೂಲಕ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಫಲಿತಾಂಶವನ್ನು ಪರೀಕ್ಷಿಸಬಹುದಾಗಿ. ಫಲಿತಾಂಶ ನೋಡಲು https://karresults.nic.in ಲಿಂಕ್ ಬಳಸಬಹುದು.


Post a Comment

0 Comments