ಭಾರತ-ಪಾಕ್ ಕದನ ವಿರಾಮ: 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ..!!

ಭಾರತ ಮತ್ತು ಪಾಕಿಸ್ತಾನದ ನಡುವೆ ದಾಳಿ ಪ್ರತಿ ದಾಳಿಗಳು ನಡೆದಿದ್ದು, ಕದನ ವಿರಾಮ ಘೋಷಣೆಯ ನಂತರ ಉದ್ವಿಗ್ನ ಪರಿಸ್ಥಿತಿ ತಿಳಿಯಾಗಿದೆ. ಈ ಹಿನ್ನೆಲೆಯಲ್ಲಿ 32 ವಿಮಾನ ನಿಲ್ದಾಣಗಳು ಇಂದು ಮತ್ತೆ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಣೆಯಾಗಿ ಎರಡು ದಿನಗಳು ಕಳೆದಿದ್ದು, ಹೀಗಾಗಿ ವಿಮಾನ ಹಾರಾಟಗಳಲಿ ಉಂಟಾಗಿದ್ದ ವ್ಯಕ್ತಿಯ ಮತ್ತೆ ಮೊದಲಿನ ಸ್ಥಿತಿಗೆ ಮರಳಿದೆ. 

ಭಾರತದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ತಾತ್ಕಾಲಿಕವಾಗಿ ಕನಿಷ್ಠ 32 ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಉದ್ವಿಗ್ನ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರ ಇಂದು ಈ ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾಚರಣೆ ಆರಂಭಿಸಿವೆ. ಬದಲಾದ ಸನ್ನಿವೇಶಗಳಲ್ಲಿ ವಾಣಿಜ್ಯ ವಿಮಾನಗಳ ಸಂಚಾರವನ್ನು ಮೇ 15 ರೈ ಬೆಳಿಗ್ಗೆ 5.29ರವರೆಗೆ ಸ್ಥಗಿತಗೊಳಿಸಲಾಗಿದೆ. ಆದರೆ ನಾಗರಿಕ ವಿಮಾನಗಳ ಹಾರಾಟ ಮೊದಲಿನಂತೆ ನಡೆಯಲಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ದಾಳಿ ಪ್ರತಿ ದಾಲಿಯ ಹಿನ್ನೆಲೆಯಲ್ಲಿ ಈ ವಿಮಾನ ನಿಲ್ದಾಣಗಳ ಗುರಿಯಾಗಿಸಿ ಪಾಕ್ ದಾಳಿ ನಡೆಸುತ್ತಿತ್ತು. ಈ ವಿಮಾನ ನಿಲ್ದಾಣಗಳಲ್ಲಿ ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಪಠಾಣ್ ಕೋಟ್, ಚಂಢೀಗಡ್, ಜೋಧ್ಪುರ, ಶಿಮ್ಲಾ, ಜಾಮ್ ನಗರ್ ಮತ್ತು ಧರ್ಮಶಾಲಾ ಕೂಡ ಸೇರಿತ್ತು. ಏರ್ ಇಂಡಿಯಾ, ಇಂಡಿಗೋ, ಏರ್ ಇಂಡಿಯಾ ಎಕ್ಸ್ಪ್ರೆಸ್, ಆಕಾಶ್ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳ ವಿಮಾನ ಹಾರಾಟವನ್ನು ರದ್ದುಪಡಿಸಲಾಗಿತ್ತು.



Post a Comment

0 Comments