ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಭಾರತವು ಸರಿಯಾಗಿ ಪ್ರತ್ಯುತ್ತರ ನೀಡುತ್ತಲೇ ಇದೆ. ಇದರಿಂದ ತತ್ತರಿಸಿರುವ ಪಾಕಿಸ್ತಾನವು ಇಂದು ಭಾರತದೊಂದಿಗೆ ಶಾಂತಿ ಮಾತುಕತೆಗೆ ಪ್ರಯತ್ನಿಸಿದೆ.. ಆದರೆ ಇದೀಗ ಅಮೆರಿಕಾ ಅಧ್ಯಕ್ಷ ಡ್ರೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, ತಕ್ಷಣದಿಂದಲೇ ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಈ ಕ್ಷಣದಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು, ಮುಂದಿನ ಮಾತುಕತೆ ನಡೆಯಲಿದೆ ಎಂದು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನಗಳು ತಮ್ಮ ನಡುವಿನ ದಾಳಿಗಳಿಗೆ ತಾತ್ಕಾಲಿಕ ಇತಿಶ್ರೀ ಹಾಡಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಂಧಾನ ಮಾತುಕತೆಗಳು ಸಫಲವಾಗಿದ್ದು, ಪಾಕಿಸ್ತಾನ ಸರ್ಕಾರ ಕದನ ವಿರಾಮ ಘೋಷಿಸಿತು. ಅದರ ಬೆನ್ನಲ್ಲೇ,ಭಾರತ ಕೂಡ ಕದನ ವಿರಾಮ ಘೋಷಿಸಿದೆ. ಇದಕ್ಕೆ ಅಧಿಕೃತವಾಗಿ ಮಾಹಿತಿ ನೀಡಿರುವ ವಿದೇಶಾಂಗ ಸಚಿವ ವಿಕ್ರಂ ಮಿಸ್ತ್ರಿ ಇಂದು ಸಂಜೆ 5:00ಯಿಂದಲೇ ಕದನ ವಿರಾಮವನ್ನು ಘೋಷಿಸಲಾಗಿದೆ. ಎಲ್ಲಾ ರೀತಿಯ ದಾಳಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಹೇಳಿದರು. ಉಳಿದಂತೆ ನಾಳೆ ಉಭಯ ರಾಷ್ಟ್ರಗಳ ನಡುವೆ ಮಾತುಕತೆ ನಡೆಯಲಿದ್ದು, ಹೆಚ್ಚಿನ ಮಾಹಿತಿಯನ್ನು ಮಾಹಿತಿಯನ್ನು ಮೇ 12ರಂದು ತಿಳಿಸಲಾಗುವುದು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಹೇಳಿದ್ದಾರೆ.
0 Comments