ಸತತ 8ನೇ ದಿನವೂ ಗಡಿಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್..!!

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯು ಸತತ ಎಂಟನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕ್ ಗಡಿಯುವುದಕ್ಕೂ ಗುಂಡಿನ ಚಕಮಕ್ಕಿ ನಡೆಸಿದೆ.
 ಜಮ್ಮು ಕಾಶ್ಮೀರದ ಕುಪ್ವಾರ, ಬಾರಾಮುಲ್ಲಾ, ನೌಶೇರಾ, ಪೂಂಚ್ ಮತ್ತು ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನವು ಕದಲ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಭಾರತದ ಸೇನೆಯು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ತಿಳಿಸಿದೆ. 

ಏಪ್ರಿಲ್ 22ರಂದು ಪಹಲ್ಗಾಮ್ನ ಬೈಸರನ್ನು ಕಣಿವೆಯಲ್ಲಿ ಭಯೋತ್ಪಾದಕರು ದಾಳಿ ನಡೆಸಿ 26 ಅಮಾಯಕ ಪ್ರವಾಸಿಗರನ್ನು ಕೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಭಾರತವು ಪಾಕ್ ಪ್ರಜೆಗಳಿಗೆ ವಿಸಾ ರದ್ದು ಮಾಡಿದೆ. ಏಪ್ರಿಲ್ 24ನೇ ತಾರೀಕು ರಾತ್ರಿಯಿಂದಲೇ ಪಡೆಗಳು ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ವಿವಿಧ ಸ್ಥಳಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಸತತ ಎಂಟು ದಿನಗಳಿಂದ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಈ ಬಗ್ಗೆ ಭಾರತದ ಮಿಲಿಟರಿ ಕಾರ್ಯಾಚರಣೆ ಮಹಾನ್ ನಿರ್ದೇಶಕರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.




Post a Comment

0 Comments