ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ..!!

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ರಾತ್ರಿ 8:00ಗೆ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣವನ್ನು ಮಾಡಲಿದ್ದಾರೆ.
ಪಹಲ್ಗಾಮ್ ದಾಳಿಯ ನಂತರ ಸಾರ್ವಜನಿಕವಾಗಿ ಭಾಷಣವನ್ನು ಮಾಡಿದ್ದ ನರೇಂದ್ರ ಮೋದಿಯವರು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ನಡೆಸಿದ್ದರು. ಈಗ ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆಯ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಇಂದು ರಾತ್ರಿ 8 ಗಂಟೆಗೆ ಭಾಷಣ ಮಾಡಲಿದ್ದಾರೆ. ಭಾರತದ ಜನತೆ ಮಾತ್ರವಲ್ಲದೆ ಇಡೀ ವಿಶ್ವವೇ ಕಾತರದಿಂದ ಕಾದು ನೋಡುತ್ತಿರುವ ಅಮೋಘ ಕ್ಷಣವಾಗಿರಲಿದೆ ಎಂದೇ ಹೇಳಬಹುದು.

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾತ್ರಿ ತಮ್ಮ ಭಾಷಣದಲ್ಲಿ ಏನು ಹೇಳುತ್ತಾರೆ ಎಂಬ ಕುತೂಹಲ ಪ್ರತಿಯೊಬ್ಬರಲ್ಲೂ ಇದ್ದು, ರಾತ್ರಿ 8 ಗಂಟೆಗೆ ಜನಮನದಲ್ಲಿ ಕಾಡುತ್ತಿರುವ ಹಲವು ಪ್ರಶ್ನೆಗಳಿಗೆ ಉತ್ತರವು ಸಿಗಲಿದೆ ಎಂಬ ನಿರೀಕ್ಷೆ ಇದೆ.

Post a Comment

0 Comments