ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಹೆಚ್ ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, 2025 ನೇ ಸಾಲಿನ ಎಸ್‍ಎಸ್‍ಎಲ್ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ 21.03.2025 ರಿಂದ 04.04 2025 ರವರೆಗೆ ನಡೆದಿದೆ. ಈ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಎಸ್ಎಸ್ ಎಲ್ ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಿಸುವ ಕುರಿತು 02.05.2025ರಂದು ಬೆಳಿಗ್ಗೆ 11: 30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.
ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
0 Comments