ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಾಕಿ ಉಳಿದಿರುವ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳ ಗ್ರಹಲಕ್ಷ್ಮಿ ಯೋಜನೆ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮೂರು ತಿಂಗಳ ಈ ಹಣ ಬಿಡುಗಡೆ ಮಾಡಲು ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಇನ್ನೆರಡು ತಿಂಗಳ ಹಣವನ್ನು ರಾಜ್ಯದ ಗೃಹಲಕ್ಷ್ಮಿಯರ ಖಾತೆಗೆ ಜಮಾ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
0 Comments