ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ ಅವರನ್ನು ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರ ಅಂತ್ಯಕ್ರಿಯೆಯು ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ 3:00 ನತರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಿದ್ದಲಿಂಗಯ್ಯ ಅವರು ತುಮಕೂರು ಜಿಲ್ಲೆಯ ಬೆಳ್ಳಾವಿಯಲ್ಲಿ 1931 ರಲ್ಲಿ ಜನಿಸಿದ್ದರು. ನಮ್ಮ ಕಾಲೇಜು ಶಿಕ್ಷಣದವರೆಗಿನ ಎಲ್ಲಾ ವಿದ್ಯಾಭ್ಯಾಸವನ್ನು ತಮ್ಮ ಊರಿನಲ್ಲೇ ಪೂರೈಸಿದ್ದು ನಂತರ ಬಿಎ, ಎಂಎ ಪದವಿಯನ್ನು ಕನ್ನಡದಲ್ಲಿ ಪೂರೈಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು.
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ದರು. ನಂತರ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲದೆ, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಸಾಹಿತಿ, ಕವಿ, ವಿಮರ್ಶಕರಾಗಿ ಗುರುತಿಸಿಕೊಂಡಿದ್ದ ಸಿದ್ದಲಿಂಗಯ್ಯನವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿದ್ದರು.
0 Comments