ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಮೂರು ಗಂಟೆಗಳಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಗಿಸಿದ್ದು, ಭಾರತದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಈ ಬೆಳವಣಿಗೆಯ ನಡುವೆ ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಗಿಸಿ ವಿಶ್ವಾಸಘಾತುಕ ಕೆಲಸ ಮಾಡುತ್ತಿದೆ. ಕದನ ವಿರಾಮ ಉಲ್ಲಂಘನೆಯನ್ನು ಭಾರತವು ತೀವ್ರವಾಗಿ ಪರಿಗಣಿಸಲಾಗುತ್ತದೆ. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಮುನ್ನಡೆಯದಿದ್ದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ.
ಈಗಾಗಲೇ ಕೇಂದ್ರ ಸರ್ಕಾರವು ಭಾರತದ ಮೂರೂ ಸೇನಾ ಪಡೆಗಳಿಗೆ ಸಂಪೂರ್ಣ ಅಧಿಕಾರವನ್ನು ನೀಡಿದೆ. ಪಾಕಿಸ್ತಾನದ ಕದನ ವಿರಾಮದ ಬೆನ್ನಲ್ಲೇ ಗಡಿ ಪ್ರದೇಶಗಳು ಮತ್ತು ಎಲ್ಲಾ ರಾಜ್ಯಗಳಲ್ಲಿಯೂ ಈಗ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ.
0 Comments