ಈ ಸಿಹಿ ತಿನಿಸುಗಳನ್ನು ಪುಟಾಣಿ ಮಕ್ಕಳು ಯಥೇಚ್ಛವಾಗಿ ತಿನ್ನುವುದರಿಂದ ಪುಟಾಣಿ ಮಕ್ಕಳ ಆರೋಗ್ಯದ ಮೇಲೆ ಇದು ಬಹುಬೇಗನೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಚಾಕಲೇಟ್, ಜೇಮ್ಸ್ ಮತ್ತು ಜಲ್ಲಿ ಅಂತಹ ಆಹಾರ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕ ಬಣ್ಣಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಇಲಾಖೆಯು ಇದೀಗ ಸ್ಯಾಂಪಲ್ ಸಂಗ್ರಹಿಸಿ ಅವುಗಳನ್ನು ಪರೀಕ್ಷಿಸುವಂತೆ ಸೂಚನೆ ನೀಡಿದೆ. ಈ ರಾಸಾಯನಿಕ ಪದಾರ್ಥಗಳನ್ನೊಳಗೊಂಡ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳು ಬರುವ ಸಾಧ್ಯತೆ ಇದೆ. ಆದ್ದರಿಂದ ಕೇಂದ್ರ ಎಫ್ ಎಸ್ ಎ ಐ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಆಹಾರ ಇಲಾಖೆಯು ಸ್ಯಾಂಪಲ್ ಪಡೆದು ಪರೀಕ್ಷೆಗೆ ಮುಂದಾಗಿದೆ.
ಪೋಷಕರು ಇಂತಹ ತಿಳಿಸುಗಳಿಂದ ಮಕ್ಕಳನ್ನು ಆದಷ್ಟು ದೂರವಿರಿಸುವುದು ತುಂಬಾನೇ ಮುಖ್ಯ. ಇಲ್ಲವಾದಲ್ಲಿ ತಮ್ಮ ಮಕ್ಕಳ ಆರೋಗ್ಯವು ಸಣ್ಣ ವಯಸ್ಸಿನಲ್ಲೇ ಹದಗೆಡುವ ಸಾಧ್ಯತೆ ಬಹಳಷ್ಟಿದೆ.
0 Comments