ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ

ಜುಲೈ 21ರಿಂದ ಆಗಸ್ಟ್ 12ರವರೆಗೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ.ಸಂಸತ್ತಿನ ಉಭಯ ಸದನಗಳಾದ ರಾಜ್ಯ ಸಭೆ ಮತ್ತು ಲೋಕಸಭೆಗಳು ಮೂರು ತಿಂಗಳ ವಿರಾಮದ ನಂತರ ಜುಲೈ 21 ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನವನ್ನು ಕರೆದಿದ್ದು ಸಭೆ ಸೇರಲಿವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ನಿಖರವಾದ ದಾಳಿ ಆಪರೇಷನ್ ಸಿಂದೂರ್ ನಂತರ ಇದು ಸಂಸತ್ತಿನ ಮೊದಲ ಅಧಿವೇಶನವಾಗಿದೆ.


Post a Comment

0 Comments